ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸದಾ ಸುದ್ದಿಯಲ್ಲಿರುವ ವ್ಯಕ್ತಿ. ಒಂದಲ್ಲಾ ಒಂದು ವಿವಾದ ಅಥವಾ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳಿಂದ ಸದಾ ಪತ್ರಿಕೆಗಳಿಗೆ ಆಹಾರವಾಗುವ ಯೆಡ್ಡಿ, ತಮ್ಮ ‘ಸ್ವಾಮಿ’ ನಿಷ್ಠೆಯಿಂದಲೂ ಹೆಸರುವಾಸಿ. ಅದೇನೋ ನಮ್ಮ ಮುಖ್ಯಮಂತ್ರಿಗಳಿಗೆ ಸ್ವಾಮೀಜಿಗಳೆಂದರೆ ಎಲ್ಲಿಲ್ಲದ ಗೌರವ, ಅಭಿಮಾನ. ಯಾವುದಾದರೂ ಕ್ಷೇತ್ರ ಅಭಿವೃದ್ಧಿ ಆಗಬೇಕೆಂದಿದ್ದರೆ ಅದನ್ನು ಸ್ವಾಮೀಜಿವರ್ಯರಿಗೆ ಅರ್ಪಿಸಿಬಿಡುವಷ್ಟು ಉದಾರವಾದಿ (ಆ ಮೂಲಕ ತಾನು ಅಸಮರ್ಥ ಎಂದು ತೋರಿಸಿಕೊಳ್ಳುವವರೆಗೆ). ಸ್ವಾಮೀಜಿಗಳನ್ನು ಕಂಡರೆ ಸಾಕು ಓಡಿ ಹೋಗಿ ಕೈಮುಗಿದು ಅವರ ಆಶಿರ್ವಾದ ತೆಗೆದುಕೊಳ್ಳದಿದ್ದರೆ ಅವರಿಗೆ ಬಹುಶಃ ದಿನವಿಡೀ ನಿದ್ದೆಬಾರದು. ಹಣದ ರಾಶಿಯನ್ನೇ ಒಂದಲ್ಲಾ ಒಂದು ರೀತಿಯಲ್ಲಿ ಕೊಳ್ಳೆಹೊಡೆದು ದುಡ್ಡು ಮಾಡಿರುವ ಮಠ, ಮಠಾಧಿಪತಿಗಳಿಗೆ ರಾಜ್ಯದ ಬೊಕ್ಕಸದಿಂದ ಬೇಕಾಬಿಟ್ಟಿಯಾಗಿ ಧನಸಹಾಯ ಮಾಡುವ ಯೆಡಿಯೂರಪ್ಪನವರು ಈಚೆಗಷ್ಟೇ ಸರ್ಕಾರಿ ದುಡ್ಡಲ್ಲಿ ವರ್ಷಾಚರಣೆ ಆಚರಿಸಿದ್ದಾರೆ. ಮೊದಲ ಆರು ತಿಂಗಳನ್ನು ‘ಆಪರೇಷನ್ ಕಮಲ’ದಲ್ಲಿ ತೊಡಗಿಸಿಕೊಂಡ ಯೆಡ್ಡಿ ಕುಟುಂಬ, ನಂತರದ ಆರು ತಿಂಗಳನ್ನು ಲೋಕಸಭಾ ಚುನಾವಣೆಯಲ್ಲೇ ಕಳೆಯಿತು. ಆ ಮಧ್ಯೆಯೇ ಸಾವಿರಾರು ಕೋಟಿ. ರೂ.ಗಳ ಯೋಜನೆಯನ್ನು ನಿರಂತರವಾಗಿ ಘೋಷಿಸುತ್ತಲೇ ಬಂದ ಮುಖ್ಯಮಂತ್ರಿ ಅವರಲ್ಲಿ, ಯಾವೆಲ್ಲಾ ಯೋಜನೆಗಳು ಅನುಷ್ಠಾನಗೊಂಡಿವೆ ಎಂದು ನೀವೇ ಕೇಳಿ.
ಅದೇನೆ ಇರಲಿ, ಯೆಡ್ಡಿಯವರ ‘ಸ್ವಾಮೀಜಿ’ ಪ್ರೀತಿ ಕುರಿತು ಕೆಲವು ಚಿತ್ರಗಳು ಇಲ್ಲಿವೆ. ಒಮ್ಮೆ ನೋಡಿ.







5 comments:
ಸ್ವಾಮಿಯೇ ಶರಣಂ ಅಯ್ಯಯ್ಯಪ್ಪ....
Good observation...
ನಿಮ್ಮ ಸಂಗ್ರಹ ತುಂಬಾ ಚೆನ್ನಾಗಿದೆ...
ಯಡಿಯೂರಪ್ಪನವರಿಗೆ ಇದರಿಂದ ಲಾಭವಾಗಿದೆಯಲ್ಲ.....!
ಲಾಭವಿದ್ದರೆ ಮಾತ್ರ...
ನಮಸ್ಕಾರ...!
ಸ್ವಾಮಿನಿಷ್ಠೆ......!
ಲಾಭ ಇಲ್ಲವೆಂದರೆ...
ಬಂಗಾರಪ್ಪ...!!!
ಚಿತ್ರಸ೦ಗ್ರಹ, ಬರಹ ಎರಡೂ ಚೆನ್ನಾಗಿವೆ. Good
Post a Comment